ಕಲಬುರಗಿ: ನಗರದ ದೇವಿ'ನಗರದಲ್ಲಿ ಮನೆಗಳ್ಳತನ: ನಗದು ಸಹಿತ ₹1.67 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ
ಕಲಬುರಗಿ : ಕಲಬುರಗಿ ನಗರದಲ್ಲಿ ದಿನೇ ದಿನೇ ಮನೆಗಳ್ಳತನ ಪ್ರಕರಣಗಳು ಹೆಚ್ಚಾಗ್ತಾನೆಯಿವೆ.. ನಗರದ ದೇವಿ ನಗರ ಬಡಾವಣೆಯಲ್ಲಿ ಹಾಡಹಗಲೇ ಮನೆಗೆ ಕನ್ನ ಹಾಕಿ ನಗದು ಹಣ ಸಹಿತ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣಗಳನ್ನ ದೋಚಿಕೊಂಡು ಹೋಗಿದ್ದಾರೆ.. ನ12 ರಂದು ಬೆಳಗ್ಗೆ 9 ಗಂಟೆಗೆ ಮಾಹಿತಿ ಲಭ್ಯವಾಗಿದೆ.. ಗುರುಬಸಯ್ಯ ಎಂಬುವರು ಎಂದಿನಂತೆ ಕೆಲಸಕ್ಕೆ ಹೋದ ವೇಳೆ ಪತ್ನಿ ಸುರೇಖ ಸಹ ಕಾರ್ಯಕ್ರಮಕ್ಕೆ ಹೋಗಿದ್ದಾರೆ. ಈ ವೇಳೆ ಮನೆ ಬೀಗ ಮುರಿದು ಬೆಳ್ಳಿ, ಚಿನ್ನಾಭರಣ ಸಹಿತ ₹1.67 ಲಕ್ಷ ಮೌಲ್ಯದ ವಸ್ತುಗಳನ್ನ ದೋಚಿಕೊಂಡು ಹೋಗಿದ್ದಾರೆ. ಈ ಬಗ್ಗೆ ಆರ್ಜಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..