ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಅವರು ಎರಡು ಪ್ರಮುಖ ನಗರಸ್ತಂಭಗಳಾಗಿದ್ದಾರೆ ಎಂದು ಕುರುಬ ಸಮಾಜದ ಮುಖಂಡ ಜೆಎಂ ಕೊರಬು ಹೇಳಿದರು. ಸಾಮಾಜಿಕ ನ್ಯಾಯ ಹಾಗೂ ಅಭಿವೃದ್ಧಿ ಹೋರಾಟದಲ್ಲಿ ತಂದೆ-ಮಗ ಮಹತ್ವದ ಪಾತ್ರ ವಹಿಸುತ್ತಿದ್ದು, ಕಲಬುರಗಿಯ ವಾಜಪೇಯಿ ಬಡಾವಣೆಯಲ್ಲಿ ₹30 ಕೋಟಿ ವೆಚ್ಚದಲ್ಲಿ 10,000 ಚ.ಅಡಿ ವಿಸ್ತೀರ್ಣದ ಪ್ರಬುದ್ಧ ಪರೀಕ್ಷಾ ಪೂರ್ವ ತರಬೇತಿ ಅಕಾಡೆಮಿ ನಿರ್ಮಿಸಿ ಸಚಿವ ಪ್ರಿಯಾಂಕ್ ಖರ್ಗೆ ಲೋಕಾರ್ಪಣೆ ಮಾಡಿದ್ದಾರೆ. ಇದು ಕಲ್ಯಾಣ ಕರ್ನಾಟಕದ ಯುವ ಪ್ರತಿಭೆಗಳಿಗೆ ಹೊಸ ಅವಕಾಶ ಕಲ್ಪಿಸಲಿದೆ ಎಂದು ಸೋಮವಾರ 1 ಗಂಟೆ ಸುಮಾರಿಗೆ ಮಾತನಾಡಿ ಹೇಳಿದರು.