ಜಗಳೂರು: ಭದ್ರಾ ಮೇಲ್ದಂಡೆ ಯೋಜನೆ ಸಮಗ್ರ ನೀರಾವರಿಗೆ ಒತ್ತಾಯಿಸಿ ಬೃಹತ್ ಸಮಾವೇಶ ಹಿನ್ನೆಲೆ ಪಟ್ಟಣದಲ್ಲಿ ಪೂರ್ವಭಾವಿ ಸಭೆ
ಜಗಳೂರು ತಾಲ್ಲೂಕಿಗೆ ಭದ್ರಾ ಮೇಲ್ದಂಡೆ ಯೋಜನೆ ಸಮಗ್ರ ನೀರಾವರಿಗೆ ಒತ್ತಾಯಿಸಿ ಮಾ.27 ರಂದು ದೊಣೆಹಳ್ಳಿ ಗ್ರಾಮದಲ್ಲಿ ಜಾಗೃತಿ ಸಮಾವೇಶ ಆಯೋಜಿಸಲಾಗಿದೆ. ಈ ಹಿನ್ನೆಲೆ ಜಗಳೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂಭಾಗದ ಕ್ಲಬ್‌ನಲ್ಲಿ ಸೋಮವಾರ ಭದ್ರಾ ಮೇಲ್ದಂಡೆ ನೀರಾವರಿ ಹೋರಾಟ ಸಮಿತಿಯಿಂದ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿತ್ತು.