ಮಳವಳ್ಳಿ: ಕೊನ್ನಾಪುರ ಗ್ರಾಮದಲ್ಲಿ ಇರುವ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಮತ್ತು ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮ
ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಕೊನ್ನಾಪುರ ಗ್ರಾಮದಲ್ಲಿ ಇರುವ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಹಲಗೂರು ವೃತ್ತದ 'ಪೌಷ್ಟಿಕ ಆಹಾರ ಮತ್ತು ಪೋಷಣ್ ಅಭಿಯಾನ ಮಾಸಾಚಾರಣೆ' ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವುದರ ಮೂಲಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಂಜಮ್ಮಣಿ ಉದ್ಘಾಟಿಸಿದರು. ನಂತರ ನಂಜಮ್ಮಣಿ ಅವರು ಮಾತನಾಡಿ, ಪ್ರತಿಯೊಬ್ಬರೂ ಪೌಷ್ಟಿಕ ಆಹಾರ ಸೇವನೆ ಮಾಡುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ. ಗಭರ್ಿಣಿಯರು ಹಾಗೂ ಹದಿ ಹರೆಯದ ಹೆಣ್ಣು ಮಕ್ಕಳಲ್ಲಿ ರಕ್ತ ಹೀನತೆ ತಡೆಗಟ್ಟಲು ಪೌಷ್ಟಿಕ ಆಹಾರ ಸಹಕಾರಿಯಾಗಲಿದೆ ಎಂದು ಸಲಹೆ ನೀಡಿದರು. ಉತ್ತಮ ಆರೋಗ್ಯದ ಹಿತದೃಷ್ಟಿಯಿಂದ ಬೇಕರಿ ಉತ್ಪನ್ನಗಳು ಮತ್ತು ಜಂಕ್ ಪುಡ್ ಬಳಕೆ ಕೈ ಬಿಡಬೇಕು. ದಿನನಿತ್ಯದ ಆಹಾರದ