ಕಂಪ್ಲಿ: ಬಸವಾದಿ ಶರಣ ಹೂಗಾತ ಮಾದಯ್ಯ ಜಯಂತಿ, ನಗರದಲ್ಲಿ ಭಾವಚಿತ್ರ ಮೆರವಣಿಗೆ
Kampli, Ballari | Sep 14, 2025 ಸೆಪ್ಟಂಬರ್ 14, ಭಾನುವಾರ ಮಧ್ಯಾಹ್ನ 2 ಗಂಟೆಗೆ ಕಂಪ್ಲಿ ಪಟ್ಟಣದ ಸಾಂಗತ್ರಯ ಸಂಸ್ಕೃತ ಪಾಠ ಶಾಲೆಯಲ್ಲಿ ಹೂಗಾರ ಸಮಾಜ ಸೇವಾ ಸಂಘದ ವತಿಯಿಂದ ಶ್ರೀ ಬಸವಾದಿ ಶರಣ ಹೂಗಾರ ಮಾದಯ್ಯನವರ 9ನೇ ವರ್ಷದ ಜಯಂತೋತ್ಸವ ಕಾರ್ಯಕ್ರಮವನ್ನು ಭಕ್ತಿಪೂರ್ಣವಾಗಿ ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ಶರಣ ಮಾದಯ್ಯನವರ ಭಾವಚಿತ್ರವನ್ನು ನಗರದ ಪ್ರಮುಖ ಬೀದಿಗಳಲ್ಲಿ ಶೋಭಾ ಮೆರವಣಿಗೆ ಮೂಲಕ ಸಾಗಿಸಲಾಯಿತು. ಭಕ್ತರು, ಸಮಾಜದ ಸದಸ್ಯರು ಹಾಗೂ ವಿದ್ಯಾರ್ಥಿಗಳು ಭಾವಪೂರ್ಣವಾಗಿ ಭಾಗವಹಿಸಿದರು.ಕಾರ್ಯಕ್ರಮದಲ್ಲಿ ಶರಣರ ಜೀವನ, ಉಪದೇಶ ಹಾಗೂ ಸಮಾಜಸೇವಾ ಚಟುವಟಿಕೆಗಳ ಕುರಿತು ಹಿರಿಯರು ಮಾತನಾಡಿ, ಯುವ ಪೀಳಿಗೆಯವರು ಶರಣರ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕೆಂದು ಕರೆ ನ