ಶಿವಮೊಗ್ಗ: ನಗರದಲ್ಲಿ ಜಿಲ್ಲಾಧಿಕಾರಿಗಳಿಂದ ಲಾರ್ವ ಸಮೀಕ್ಷೆ ಉತ್ಪತ್ತಿ ತಾಣಗಳ ನಾಶ ಚಟುವಟಿಕೆ
ನೀರು ತುಂಬುವ ಡ್ರಮ್ ಬಕೆಟ್ ತೊಟ್ಟಿ ಮತ್ತು ಇತರೆ ನೀರು ಸಂಗ್ರಹಿಸುವ ಪರಿಕರಗಳನ್ನು ಸ್ವಚ್ಛಗೊಳಿಸಬೇಕು ಮತ್ತು ಮಳೆ ನೀರು ಸಂಗ್ರಹವಾಗುವ ಗಣ ತ್ಯಾಜ್ಯ ವಸ್ತುಗಳ ವಿಲೇವಾರಿ ಮಾಡಬೇಕು ಹಾಗೂ ತಮ್ಮ ಮನೆ ಸುತ್ತಮುತ್ತ ಸ್ವಚ್ಛತೆಯನ್ನ ಕಾಪಾಡುವ ಮೂಲಕಾ ಡೆಂಗ್ಯೂ ನಿಯಂತ್ರಣದಲ್ಲಿ ಸಾರ್ವಜನಿಕರು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗ್ಗಡೆಯವರು ಮನವಿ ಮಾಡಿದ್ದಾರೆ. ನಿಯಂತ್ರಣಕ್ಕಾಗಿ ಸರ್ಕಾರ ಪ್ರತಿ ಶುಕ್ರವಾರವನ್ನು ಡೆಂಗ್ಯೂ ಹರಡುವ ಈಡಿಸ್ ಲಾರ್ವಾ ಉತ್ಪತ್ತಿ ತಾಣಗಳ ನಾಶಪಡಿಸುವ ಚಟುವಟಿಕೆ ದಿನವಾಗಿ ಅನುಷ್ಠಾನಗೊಳಿಸಿದೆ ಈ ಹಿನ್ನೆಲೆ ಶುಕ್ರವಾರ ಜಿಲ್ಲಾಧಿಕಾರಿ ಗುರುದತ್ತು ಹೆಗಡೆ ಅವರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮನೆಗಳಿಗೆ ತೆರಳಿ ಸಾರ್ವಜನಿಕರಲ್ಲಿ ಈ ಕುರಿತು ಅರಿವು ಮೂಡಿಸಿದರು.