ಬಾಗೇಪಲ್ಲಿ: ಪುಲ್ಲಗಲ್ಲು ಕ್ರಾಸ್ ಸಮೀಪ ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ಆರೋಪಿಗಳ ಬಂಧನ
ಅಕ್ರಮವಾಗಿ ಮಧ್ಯ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಚೇಳೂರು ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಾಗೇಪಲ್ಲಿ ತಾಲೂಕಿನಿಂದ ಬೇರ್ಪಟ್ಟ ನೂತನ ಚೇಳೂರು ತಾಲೂಕಿನ ಪುಲ್ಲಗಲ್ಲು ಕ್ರಾಸ್ ಸಮೀಪ ಇಂದಿನ ಮಾಹಿತಿಯಂತೆ ಬೈಕ್ ನಲ್ಲಿ ಇಬ್ಬರು ವ್ಯಕ್ತಿಗಳು ಅಕ್ರಮವಾಗಿ ಮದ್ಯವನ್ನು ಸಾಗಾಟ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನ ಬಂಧಿಸಿ ಮಾಲನ್ನು ಜಪ್ತಿ ಮಾಡಿದ್ದಾರೆ. ಆರೋಪಿತರನ್ನು ಕೃಷ್ಣಪ್ಪ ಮತ್ತು ರವೀಂದ್ರ ನಾಯಕ್ ಎಂದು ಗುರುತಿಸಲಾಗಿದೆ.