ಔರಾದ್: ಕರ್ತವ್ಯ ಲೋಪ ಹಿನ್ನೆಲೆ ಹೆಡ್ಗಾಪುರ್ ಪಿಡಿಒ ಅಮಾನತು
Aurad, Bidar | Oct 29, 2025 ಕರ್ತವಲೋಪ ಆರೋಪದ ಹಿನ್ನೆಲೆಯಲ್ಲಿ ತಾಲೂಕಿನ ಹೆಡ್ಗಪುರ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹಾಲಕ್ಷ್ಮಿ ಅವರನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಕ ಅಧಿಕಾರಿಯವರು ಅಮಾನತ್ತು ಗೊಳಿಸಿ ಆದೇಶ ಹೊರಡಿಸಲಾದ ವಿಷಯ ಬುಧವಾರ ಸಂಜೆ 5ಕ್ಕೆ ತಿಳಿದುಬಂದಿದೆ. ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಹಾಲಕ್ಷ್ಮಿ ಅವರು ಗ್ರಾಮ ಪಂಚಾಯತ್ ಅಧ್ಯಕ್ಷರ ಅಧಿಕಾರ ದುರ್ಬಳಕೆ ಮಾಡಿಕೊಂಡ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಕ ಅಧಿಕಾರಿಗಳು ಈ ಆದೇಶ ಹೊರಡಿಸಿದ್ದು ವಿಚಾರಣೆ ಕಾಯ್ದಿರಿಸಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.