ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಉದ್ದು ಖರೀದಿ ಆರಂಭವಾಗಿದ್ದರೂ, ಮಳೆಯಿಂದಾಗಿ ಬೆಳೆ ಹಾನಿಗೊಳಗಾಗಿ ಗುಣಮಟ್ಟ ಕುಸಿದಿರುವುದರಿಂದ ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಪರದಾಡುತ್ತಿದ್ದಾರೆ. ಖರೀದಿ ಕೇಂದ್ರಗಳಲ್ಲಿ ಎಫ್ಎಕ್ಯೂ ಗುಣಮಟ್ಟವಿಲ್ಲ ಎಂಬ ಕಾರಣಕ್ಕೆ ರೈತರ ಧಾನ್ಯಗಳನ್ನು ತಿರಸ್ಕರಿಸಲಾಗುತ್ತಿದೆ. ಧಾರವಾಡ ಹಳೆ ಎಪಿಎಂಸಿ ಮಾರುಕಟ್ಟೆಯಲ್ಲಿನ ಒಕ್ಕಲುತನ ಹುಟ್ಟುವಳಿ ಕೇಂದ್ರದ ಆರಂಭಿಸಿದ ಉದ್ದು ಖರೀದಿ