ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿ ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಸೊನ್ನ ಕ್ರಾಸ್ ಹತ್ತಿರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.ಆಸ್ಪತ್ರೆ ಸಾಗಿಸುವ ಮಾರ್ಗದಲ್ಲಿ ನೆಲೋಗಿ ಗ್ರಾಮದ ಬಸವರಾಜ ಹೂಗಾರ್ ಸಾವನ್ನಪ್ಪಿದ್ದಾರೆ. ಹಿಂಬದಿಯ ಸವಾರ ಜಾಕೀರ್ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು ಜೇವರ್ಗಿಯ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜೇವರ್ಗಿಯ ತಹಶೀಲ್ ಕಚೇರಿಯ ಕಂದಾಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಮೃತ ಬಸವರಾಜ ದೈನಂದಿನಂತೆ ಕೆಲಸ ಮುಗಿಸಿ ಬೈಕ್ ಮೇಲೆ ಸ್ವಗ್ರಾಮಕ್ಕೆ ತೆರಳುವ ವೇಳೆ ರಾತ್ರಿ 11-30ರ ಸುಮಾರಿಗೆ ಘಟನೆ ನಡೆದಿದೆ. ಸೊನ್ನ ಕ್ರಾಸ್ ಹತ್ತಿರದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಪಾರ್ಕಿಂಗ್ ಲೈಟ್ ಮತ್ತು ರೇಡಿಯಂ ಹಾಕದೆ ನಿಲ್ಲಿಸಿರುವ ಲಾರಿ