ನೆಲಮಂಗಲ: ಟಿ.ಬೇಗೂರಿನ ಖಾಸಗಿ ಭವನದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ವಿವಿಧ ಪಕ್ಷದ 400ಕ್ಕೂ ಹೆಚ್ಚು ಕಾರ್ಯಕರ್ತರು
ವಿವಿಧ ಪಕ್ಷಗಳ 400ಕ್ಕೂ ಹೆಚ್ಚು ಕಾರ್ಯಕರ್ತರು ಟಿ.ಬೇಗೂರಿನ ಖಾಸಗಿ ಭವನದಲ್ಲಿ ಭಾನುವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಶಾಸಕ ಎನ್.ಶ್ರೀನಿವಾಸ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಟಿ.ಬೇಗೂರು ಜಿಪಂ ಕ್ಷೇತ್ರದ 4 ಪಂಚಾಯಿತಿಯ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು. ಲೋಕಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯಗೆ ಬಲ ತುಂಬಲು, ನೆಲಮಂಗಲ ಕಾಂಗ್ರೆಸ್ ಬ್ಲಾಕ್ ಕಾಂಗ್ರೆಸ್ ಹೊಸ ರೂಪುರೇಷೆ ನಿರ್ಮಾಣ ಮಾಡಿ ಕಾರ್ಯಕರ್ತರು ಮತ್ತು ಪ್ರಭಾವಿ ಮುಖಂಡರ ಸೇರ್ಪಡೆ ಕಾರ್ಯಕ್ರಮ ಆಯೋಜಿಸಿದ್ದರು.