ಮದ್ದೂರು: ಸೇತುವೆ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ಸವಾರರಿಬ್ಬರು ನಾಲೆಗೆ ಬಿದ್ದು ಸಾವು, ದೊಡ್ಡಹೊಸಗಾವಿ ಗ್ರಾಮದಲ್ಲಿ ಘಟನೆ
Maddur, Mandya | Jul 6, 2025 ಚಲಿಸುತ್ತಿದ್ದ ದ್ವಿಚಕ್ರ ವಾಹನ ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ನಾಲೆಗೆ ಬಿದ್ದು ಮೃತಪಟ್ಟಿರುವ ಘಟನೆ ಮದ್ದೂರು ತಾಲೂಕಿನ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಹೊಸಗಾವಿ ಗ್ರಾಮದಲ್ಲಿ ಭಾನುವಾರ ಸಂಜೆ ಜರುಗಿದೆ. ಕುಣಿಗಲ್ ತಾಲೂಕಿನ ಹೊಸಹಳ್ಳಿ ಗ್ರಾಮದ ಹುಚ್ಚೇಗೌಡ ರವರ ಪುತ್ರ 70 ವರ್ಷದ ರಾಮಣ್ಣ ಹಾಗೂ ಹಿಂಬದಿ ಸವಾರ ಕೊಪ್ಪ ಹೋಬಳಿಯ ಸೋಮನಹಳ್ಳಿ ಗ್ರಾಮದ ರಾಜುರವರ ಪುತ್ರ 19 ವರ್ಷದ ಭರತ್ ಮೃತಪಟ್ಟ ದುದರ್ೈವಿಗಳಾಗಿದ್ದಾರೆ. ಮೃತರಿಬ್ಬರು ಮದನಹಟ್ಟಿಯಮ್ಮ ದೇವಾಲಯಕ್ಕೆ ತೆರಳುತ್ತಿದ್ದ ವೇಳೆ ಅತಿ ವೇಗವಾಗಿ ಚಲಿಸುತ್ತಿದ್ದ ಟಿ.ವಿ.ಎಸ್ ದ್ವಿಚಕ್ರ ವಾಹನ ನಾಲಾ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲೆಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದು ಈ ಸಂಬಂಧ ಕೊಪ್ಪ ಪೋಲೀಸ್ ಠಾಣೆಯಲ್ಲಿ ಭಾನುವ