ಆನೇಕಲ್: ಬಳಗಾರನಹಳ್ಳಿ ಗ್ರಾಮದಲ್ಲಿ ತಾಲ್ಲೂಕು ಮಟ್ಟದ ದೇಹದಾರ್ಢ್ಯ ಸ್ಪರ್ಧೆ, ಶಾಸಕ ಶಿವಣ್ಣ ಚಾಲನೆ
ಆನೇಕಲ್ ತಾಲೂಕಿನ ನೆರಳೂರು ಪಂಚಾಯಿತಿ ವ್ಯಾಪ್ತಿಯ ಬಳಗಾರನಹಳ್ಳಿ ಗ್ರಾಮದಲ್ಲಿ ತಾಲೂಕು ಮಟ್ಟದ ದೇಹದಾರ್ಢ್ಯ ಸ್ಪರ್ಧೆ ಆಯೋಜಿಸಲಾಗಿತ್ತು. ರಾಕ್ ಫಿಟ್ನೆಸ್ ವತಿಯಿಂದ ಹಮ್ಮಿಕೊಂಡಿದ್ದ ಸ್ಪರ್ಧೆಯನ್ನು ಇಂದು ಶಾಸಕ ಶಿವಣ್ಣ ಉದ್ಘಾಟಿಸಿದರು. ತಾಲೂಕಿನ ವಿವಿಧ ಗ್ರಾಮಗಳ ಸ್ಪರ್ಧಿಗಳು ದೇಹದಾರ್ಢ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಥಳೀಯ ದೇಹದಾರ್ಢ್ಯ ಪಟುಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸ್ಪರ್ಧೆ ಆಯೋಜಿಸಲಾಗಿತ್ತು. ಗೆದ್ದವರಿಗೆ ಶಾಸಕ ಶಿವಣ್ಣ ಬಹುಮಾನ ವಿತರಿಸಿ ಶುಭ ಹಾರೈಸಿದರು.