ಸರಗೂರು: ಅಮಾಯಕ ಯುವಕರ ಮೇಲೆ ಹಲ್ಲೆ ಪ್ರಕರಣ: ಪಟ್ಟಣದಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಅಗ್ರಹಿಸಿ ಪ್ರತಿಭಟನೆ
10 ಅಮಾಯಕ ಯುವಕರ ಮೇಲೆ ಮಾರಣಂತಿಕ ಹಲ್ಲೆ ನಡೆಸಿದ ಪೊಲೀಸ್ ಇನ್ಸ್ಪೆಕ್ಟರ್ ಧನಂಜಯ್ ಮತ್ತು ಸಬ್ ಇನ್ಸ್ಪೆಕ್ಟರ್ ಜಗದೀಶ್ ದೂಳ್ ಶೆಟ್ಟಿ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು, ನೊಂದ ಯುವಕರ ಕೇಸ್ ವಾಪಸ್ ಪಡೆಯಬೇಕು ಮತ್ತು ಸರ್ಕಾರ ಅವರ ಕುಟುಂಬಕ್ಕೆ ಪರಿಹಾರ ನೀಡಿ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.