ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ ಸಮೀಪ ಇರುವ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ಹಾಸ್ಟೆಲ್ ಹಾಗಯು ಎಪಿಎಂಸಿ ಬಳಿಯ ಬಾಲಕಿಯರ ಹಾಸ್ಟೆಲ್ ಗೆ ಕರ್ನಾಟಕ ರಾಜ್ಯ ಉಪಲೋಕಾಯುಕ್ತರಾದ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಹಾಸ್ಟೆಲ್ ನಲ್ಲಿ ಊಟ, ತಿಂಡಿ ಗುಣಮಟ್ಟದಿಂದ ಇದಿಯಾ ಹಾಗೂ ಹಾಸಿಗೆ, ಬ್ರೇಡ್ ಶೀಟ್ ಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಚರ್ಚೆ ನಡೆಸಿದರು. ಇನ್ನು ಕೆಲ ಹಾಸ್ಟೆಲ್ ಗಳಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದೇ ಇರುವುದನ್ನು ಗಮನಿಸಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು.