ನಾನು ರಾಜಕೀಯ ಹಿನ್ನೆಲೆಯ ಕುಟುಂಬದಿಂದ ಬಂದವನಲ್ಲ. ಆದರೂ ಈ ಮಟ್ಟಕ್ಕೆ ಬಂದಿದ್ದೇನೆ. ಮುಂದೆಯೂ ನನ್ನ ಬಗ್ಗೆ ಪಕ್ಷದವರು ತೀರ್ಮಾನ ಮಾಡುತ್ತಾರೆ ಎಂಬ ನಂಬಿಕೆ, ಆತ್ಮವಿಶ್ವಾಸವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಭಾನುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಉದ್ಯಮಿ ಒಕ್ಕಲಿಗ ಎಕ್ಸ್ಪೋ 2026 ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಮಾತನಾಡಿ, ಅಧಿವೇಶನದಲ್ಲಿ ಒಮ್ಮೆ ಯಡಿಯೂರಪ್ಪ ಅವರಿಗೆ ಯಶಸ್ಸಿನ ಬಗ್ಗೆ ಒಂದು ಮಾತು ಹೇಳಿದ್ದೆ. ನಾವು ಬದುಕಿನಲ್ಲಿ ಯಶಸ್ಸು ಸಾಧಿಸಬೇಕಾದರೆ ನಮ್ಮಲ್ಲಿ ಧರ್ಮರಾಯನ ಧರ್ಮತ್ವ, ಕರ್ಣನ ದಾನತ್ವ, ಅರ್ಜುನನ ಗುರಿ, ವಿದುರನ ನೀತಿ, ಭೀಮನ ಬಲ, ಕೃಷ್ಣನ ತಂತ್ರ ಇರಬೇಕು.