ಶಿವಮೊಗ್ಗ: ನಗರದಲ್ಲಿ ಸಂಭ್ರಮದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
ಶಿವಮೊಗ್ಗ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ಹಲವು ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ಮಂಗಳವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನ ಆಚರಿಸಲಾಯಿತು. ಸೈನ್ಸ್ ಮೈದಾನದಿಂದ ವಾಲ್ಮೀಕಿ ಭವನದ ವರೆಗೆ ಮಹರ್ಷಿ ವಾಲ್ಮೀಕಿಗಳ ಬೃಹತ್ ಭಾವಚಿತ್ರದ ಮೆರವಣಿಗೆಯನ್ನು ನಡೆಸಿದ ಬಳಿಕ ವಿದ್ಯಾನಗರದಲ್ಲಿ ವಾಲ್ಮೀಕಿ ವೃತ್ತ ಎಂದು ನಾಮಫಲಕವನ್ನ ಶಾಸಕ ಚನ್ನಬಸಪ್ಪ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಾಲ್ಮೀಕಿ ಸಮಾಜದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.