ಶಿವಮೊಗ್ಗ ತಾಲೂಕಿನ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕು ಮುಳ್ಳುಸೋಗೆ ಗ್ರಾಮ ವಾಸಿ 82 ವರ್ಷದ ಡಿ.ತೀರ್ಥಪ್ಪ ಎಂಬ ವ್ಯಕ್ತಿ 2023ರ ನವೆಂಬರ್ನಲ್ಲಿ ಕಾಣೆಯಾಗಿದ್ದು, ಈವರೆಗೆ ಪತ್ತೆಯಾಗಿರುವುದಿಲ್ಲ. ಈ ವ್ಯಕ್ತಿಯು ಕೋಲುಮುಖ, ಸಣ್ಣ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿರುತ್ತಾರೆ. ಈ ಮೃತ ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಕುಂಸಿ ಪೊಲೀಸ್ ಠಾಣೆಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಕುಂಸಿ ಪೊಲೀಸರು ಮಂಗಳವಾರ ಸಂಜೆ 5 ಗಂಟೆಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.