ಸಿಂಧನೂರು: ಸಾಲುಮರದ ತಿಮ್ಮಕ್ಕ ಸ್ಮರಣಾರ್ಥ ಸಸಿ ನೆಡುವ ಕಾರ್ಯಕ್ರಮ
ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಅವರ ಸ್ಮರಣಾರ್ಥವಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಸಿಂಧನೂರು ತಾಲೂಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವಿವಧ ರೀತಿಯ ಹಲವು ಸಸಿಗಳನ್ನು ನೆಡುವ ಕಾರ್ಯಕ್ರಮ ನಡೆಯಿತು. ಮಂಗಳವಾರ 12 ಗಂಟೆಗೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೆಆರ್ಎಸ್ ಪಕ್ಷದ ರಾಜ್ಯ ರೈತ ಘಟಕದ ಕಾರ್ಯದರ್ಶಿ ನಿರುಪಾದಿ ಕೆ ಗೋಮರ್ಸಿ ಯವರು ಸಾಲುಮರದ ತಿಮ್ಮಕ್ಕ ತನ್ನ ಇಡೀ ಜೀವನವನ್ನು ನಾಡಿನ ಪರಿಸರಕ್ಕಾಗಿ ಮುಡುಪಾಗಿಟ್ಟು ಸುಮಾರು ಎಂಟು ಸಾವಿರಕ್ಕೂ ಹೆಚ್ಚು ಮರ ಗಿಡಗಳನ್ನು ನೆಟ್ಟು ಅವುಗಳನ್ನು ತನ್ನ ಮಕ್ಕಳಂತೆ ಪಾಲನೆ, ಪೋಷಣೆ ಮಾಡಿ ನಮಗೆ ನೀಡಿ ಹೋಗಿದ್ದಾರೆ. ಅವರ ಸೇವೆಯ ಹಾದಿಯಲ್ಲಿ ಪರಿಸರ ಉಳಿಸಿ ಬೆಳೆಸುವ ಕೆಲಸಕ್ಕೆ ಯುವಕರು ಮುಂದಾಗಬೇಕು ಎಂದರು.