ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ" ಎಂದು ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ಅವರು ತಿಳಿಸಿದರು. ಚಾಮರಾಜಪೇಟೆಯ ಬಿಡಿಸಿಸಿ ಬ್ಯಾಂಕ್ ನಲ್ಲಿ ಭಾನುವಾರ ಸಂಜೆ 6 ಗಂಟೆ ಸುಮಾರಿಗೆ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಸುರೇಶ್ ಅವರು ಚುನಾವಣೆ ಫಲಿತಾಂಶದ ಬಗ್ಗೆ ಮಾಹಿತಿ ನೀಡಿದರು. "ಇಂದು ಬ್ಯಾಂಕಿನ ಚುನಾವಣೆ ನಡೆದಿದ್ದು, 18 ಕ್ಷೇತ್ರಗಳ ಪೈಕಿ 15ರಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ನೇರವಾಗಿ ಗೆದ್ದಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ 2 ಕ್ಷೇತ್ರಗಳು, ಚನ್ನಪಟ್ಟಣದ 1, ಕನಕಪುರದ 2, ಮಾಗಡಿಯ 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು