ಕುಶಾಲನಗರ: ಕೊಡಗಿನ ಹಾರಂಗಿ ಹಿನ್ನೀರಿನಲ್ಲಿ ಈಜಲು ಹೋಗಿ ಯುವಕ ಸಾವು
ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹೇರೂರು ಗ್ರಾಮದ ಹಾರಂಗಿ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಹೊಸಕೋಟೆಯ ರಜಾಕ್(21) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ನಿನ್ನೆ ರಾತ್ರಿ ಸಂಭವಿಸಿದ ಈ ಘಟನೆಯ ಮೃತದೇಹವನ್ನು ಇಂದು ಈಶ್ವರ್ ಮಲ್ಪೆ ತಂಡ ಹಾಗೂ ಪೊಲೀಸರು ಹೊರತೆಗೆದಿದ್ದಾರೆ. ಸುಂಟಿಕೊಪ್ಪ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.