ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಕೋಲಾರ, ವತಿಯಿಂದ ಹಕ್ಕು ಪಡೆಯದ ಬ್ಯಾಂಕ್ ಠೇವಣಿಗಳನ್ನು ಕಾನೂನು ಬದ್ಧ ವಾರಸುದಾರರಿಗೆ ಹಸ್ತಾಂತರಿಸುವ ಶಿಬಿರ ಕೋಲಾರ : ಹೆಚ್ಚು ಕಾಲ ನಿಷ್ಕ್ರಿಯವಾಗಿರುವ ಖಾತೆಗಳಲ್ಲಿ ಹಕ್ಕುಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿಗಳು, ವಿಮಾ ಕಂತುಗಳು ಮತ್ತು ಷೇರು ಗಳನ್ನು ಅವುಗಳ ಮಾಲೀಕರು ಅಥವಾ ಕಾನೂನು ಬದ್ಧ ವಾರಸುದಾರರಿಗೆ ಹಸ್ತಾಂತರಿಸುವ ಶಿಬಿರವು ಶುಕ್ರವಾರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆಯಿತು. ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಪ್ರಬಂಧಕ ಶ್ರೀ ಮಹಾದೇವ್ ಜೋಶಿ ಗಣ್ಯರನ್ನು ಸ್ವಾಗತಿಸಿ, ಶಿಬಿರದ ಉದ್ದೇಶ ಹಾಗೂ ಗ್ರಾಹಕರ ಅರಿವು ಕುರಿತು ಮಾತನಾಡಿದರು. ಬ್ಯಾಂಕಿನಲ್ಲಿ ಸತತ ೧೦ ವರ್ಷಗಳಿಗೂ ನಿಷ್ಕ್ರಿಯ ಖಾತೆಗಳಲ್ಲಿರುವ ಹಣ ಮತ್ತು ಹತ್ತು ವರ್ಷಗಳಿಗಿಂತ ಹಳೆಯದಾದ ಹಕ್ಕು ಪಡೆಯ