ಹುನಗುಂದ: ವಿವಿಧ ಬೇಡಿಕೆಗಳ ಈಡೇರಿಕೆಗೆ ಕರವೇ ಒತ್ತಾಯ, ಬಿಸಲದಿನ್ನಿ ಗ್ರಾಮದಲ್ಲಿ ಪ್ರತಿಭಟನೆ
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಬಿಸಲದಿನ್ನಿ ಗ್ರಾಮದಲ್ಲಿ ಬಸ್ ನಿಲ್ದಾಣ ನಿರ್ಮಿಸುವುದು ಸೇರಿಯ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶಿವರಾಮೇಗೌಡರ ಬಣದ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ಕರವೇ ಜಿಲ್ಲಾಧ್ಯಕ್ಷ ಬಸವರಾಜ ಧರ್ಮಂತಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕರವೇ ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದರು. ಬಸ್ ನಿಲ್ದಾಣದ ನಿರ್ಮಾಣ,ಜಲಜೀವನ ಮಿಷನ್ ಯೋಜನೆ ಪೂರ್ಣಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸ್ಥಳೀಯ ಆಡಳಿತಕ್ಕೆ ಮನವಿ ಸಲ್ಲಿಸಲಾಯಿತು.