ಬೆಂಗಳೂರು ಉತ್ತರ: ಕಂದಕಕ್ಕೆ ಉರುಳಿದ ಕಂಟೇನರ್, ಇಬ್ಬರು ಸ್ಥಳದಲ್ಲಿಯೇ ದುರ್ಮರಣ
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸಿದ್ದಯ್ಯನ ದೊಡ್ಡಿಯಲ್ಲಿ ಭಾನುವಾರ ಕಂಟೇನರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳು ಕಂಟೇನರ್ ಅಡಿ ಸಿಲುಕಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಜಿಗಣಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.