ಕುಮಟಾ: ಪಟ್ಟಣದ ಹೆಗಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗ್ರಾಮ ಗ್ರಂಥಾಲಯ ಉದ್ಘಾಟನೆ
ಕುಮಟಾ ತಾಲೂಕಿನ ಹೆಗಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬುಧವಾರ ಮಧ್ಯಾಹ್ನ 12ಕ್ಕೆ ಗ್ರಾಮ ಗ್ರಂಥಾಲಯದ ಉದ್ಘಾಟನಾ ಸಮಾರಂಭ ನಡೆಯಿತು. ಕೇಂದ್ರ ಸರ್ಕಾರದ ಮಹತ್ತರ ಯೋಜನೆಯಾದ ಗ್ರಾಮ ಗ್ರಂಥಾಲಯ ಕಾರ್ಯಕ್ರಮದ ಅಡಿಯಲ್ಲಿ ಹೆಗಡೆಯ ಲುಕ್ಕೇರಿ,ಮಾಸೂರು ಹಾಗೂ ಮೇಲಿನಕೇರಿ ಭಾಗದ ಗ್ರಂಥಾಲಯಗಳನ್ನು ಶಾಸಕ ದಿನಕರ ಶೆಟ್ಟಿ ಹಾಗೂ ಅಧಿಕಾರಿಗಳ ನೇತೃತ್ವದಲ್ಲಿ ಉದ್ಘಾಟಿಸಲಾಯಿತು.