ಸಾಲಿಗ್ರಾಮದ ತಾಲ್ಲೂಕು ಕಚೇರಿಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ ಕುರಿತು ಬುಧವಾರ ಪೂರ್ವಭಾವಿ ಸಭೆ ನಡೆಸಲಾಯಿತು. ತಹಶೀಲ್ದಾರ್ ನರಗುಂದ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ, ಚುನಾವಣೆ ನೀತಿ ಸಂಹಿತೆ ಇರುವುದರಿಂದ ಜಯಂತಿಯನ್ನು ಸರಳವಾಗಿ ಆಚರಿಸಲು ಸಹಕಾರ ನೀಡುವಂತೆ ದಲಿತ ಮುಖಂಡರಿಗೆ ಮನವಿ ಮಾಡಲಾಯಿತು. ಇನ್ನು ಈ ವೇಳೆ ತಾಲ್ಲೂಕಿನ ಪ್ರಮುಖ ದಲಿತ ಮುಖಂಡರು ಮತ್ತು ತಾಲ್ಲೂಕು ಆಡಳಿತದ ಅಧಿಕಾರಿಗಳು ಭಾಗವಹಿಸಿದ್ದರು.