ಚಿತ್ರದುರ್ಗ: ಆಧುನಿಕ ಭರಾಟೆಯಲ್ಲಿ ದೇಸಿ ಕ್ರೀಡೆಗಳು ಕಣ್ಮರೆ:ನಗರದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ
ಚಿತ್ರದುರ್ಗ:-ಆಧುನಿಕತೆಯ ಭರಾಟೆಯಲ್ಲಿ ದೇಸಿಯ ಕ್ರೀಡೆಗಳು ಕಣ್ಮರೆಯಾಗುತ್ತಿವೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಹೇಳಿದರು. ನಗರದ ಸರ್ಕಾರಿ ಕಲಾ ಕಾಲೇಜು ಕ್ರೀಡಾಂಗಣದಲ್ಲಿ ಮಂಗಳವಾರ ದಾವಣಗೆರೆ ವಿಶ್ವವಿದ್ಯಾನಿಲಯ, ದಾವಣಗೆರೆ ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘ ಇವರ ಸಂಯುಕ್ತಾಶ್ರಯದಲ್ಲಿ “ದಾವಣಗೆರೆ ವಿಶ್ವವಿದ್ಯಾನಿಲಯ ಅಂತರ ಕಾಲೇಜು ನೆಟ್ ಬಾಲ್ ಪಂದ್ಯಾವಳಿ ಮತ್ತು ಆಯ್ಕೆ ಉದ್ಘಾಟಿಸಿ ಅವರು ಮಾತನಾಡಿದರು. ಯುವಕರು ಸೇರಿ ಎಲ್ಲಾ ವಯಸ್ಕರು ಆಧುನಿಕತೆಗೆ ಸಿಲುಕಿ ದೇಸಿಯ ವಿವಿಧ ಕ್ರೀಡಾ ಪ್ರಕಾರಗಳು ಕಣ್ಮರೆಯಾಗುತ್ತಿವೆ. ಗ್ರಾಮೀಣ ಪರಿಸರದಲ್ಲಿ ಜನರ ಮನರಂಜನೆಯ ಆಟಗಳು ಇಲ್ಲವಾಗಿವೆ. ಮೊಬೈಲ್ ಬಳಕೆಯ ಸಂಸ್ಕøತಿ ಹೆಚ್ಚಾಗಿರುವ