ಭಟ್ಕಳ: ಪಟ್ಟಣದ ತಾಪಂ ಕಚೇರಿಯಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು
ಭಟ್ಕಳದ ಪಟ್ಟಣದ ತಾಪಂ ಕಚೇರಿಯಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜಿಪಂ ಸಿಇಒ ಡಾ. ದಿಲೀಷ್ ಶಶಿ ಅಧ್ಯಕ್ಷತೆಯಲ್ಲಿ ಸೋಮವಾರ ಸಂಜೆ 3.30ಕ್ಕೆ ಸಭೆ ನಡೆಸಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸಕ್ರಿಯ ಕೂಲಿಕಾರರ ಇ-ಕೆವೈಸಿ ಪ್ರಕ್ರಿಯೆಯನ್ನು ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ನಿರ್ದೇಶನದಂತೆ ಅಕ್ಟೋಬರ್ 31 ರ ಒಳಗೆ ಕಡ್ಡಾಯವಾಗಿ ಶೇ.100 ರಷ್ಟು ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.