ಧಾರವಾಡ: ಧಾರವಾಡ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್
ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಅವರು ಧಾರವಾಡ ಪ್ರವಾಸಿ ಮಂದಿರದಲ್ಲಿ ಶನಿವಾರ ಮದ್ಯಾಹ್ನ 2 ಗಂಟೆಗೆ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಜನರ ಸಮಸ್ಯೆ ಆಲಿಸಿದರು. ಜನರು ತಮ್ಮ ವೈಯಕ್ತಿಕ ಮತ್ತು ಸಾಮೂಹಿಕ ಸಮಸ್ಯೆಗಳ ಬಗ್ಗೆ ಸಚಿವರಿಗೆ ಮನವಿ ಪತ್ರಗಳನ್ನು ಸಲ್ಲಿಸಿದರು. ಇದೇ ವೇಳೆ ಸಚಿವ ಸಂತೋಷ ಲಾಡ್ ಅವರನ್ನು ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಂಡು ಸಮಸ್ಯೆ ನಿವಾರಣೆಗೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.