ಬೀದರ್: ನಗರಕ್ಕೆ ಆಗಮಿಸಿದ ಜೆಡಿಎಸ್ ರಾಜ್ಯ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಗೆ ಬರಮಾಡಿಕೊಂಡ ಜಿಲ್ಲಾ ಜೆಡಿಎಸ್ ಪದಾಧಿಕಾರಿಗಳು
Bidar, Bidar | Sep 16, 2025 ಅತಿವೃಷ್ಟಿಯಿಂದ ಆಗಿರುವ ಬೆಳೆ ಹಾಗೂ ಕಟ್ಟಡಗಳ ಹಾನಿಯನ್ನು ಪರಿಶೀಲಿಸುವ ಸಂಬಂಧ ನಗರಕ್ಕೆ ಮಂಗಳವಾರ ಮಧ್ಯಾನ 12ಕ್ಕೆ ಭೇಟಿ ನೀಡಿದ ವೇಳೆ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಜಿಲ್ಲಾ ಘಟಕದಿಂದ ಬರಮಾಡಿಕೊಳ್ಳಲಾಯಿತು. ಈ ವೇಳೆ ಪಕ್ಷದ ಜಿಲ್ಲಾಧ್ಯಕ್ಷ ರಮೇಶ್ ಪಾಟೀಲ್ ಸೋಲಪುರ್, ಮಾಜಿ ಸಚಿವ ಬಂಡೆಪ್ಪ ಕಾಶಂಪುರ, ಮುಖಂಡರಾದ ಸೂರ್ಯಕಾಂತ್ ನಾಗಮಾರಪಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಪುತ್ರ ಮಾಳಗೆ ಇದ್ದರು.