ಕುಂದಗೋಳ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಹಶೀಲ್ದಾರ್ ರಾಜು ಮಾವರಕರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಹೌದು ! 2024-25ನೇ ಸಾಲಿನ ಬೆಳೆ ವಿಮೆ ಬಿಡುಗಡೆ, ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಬೇಕು, ಕುಂದಗೋಳ ಪಟ್ಟಣದಲ್ಲೇ ಹತ್ತಿ ಖರೀದಿ ಕೇಂದ್ರ ತೆರೆಯಬೇಕು, ಬೆಳೆ ಪರಿಹಾರ ಶೀಘ್ರವೇ ಹಾಕಬೇಕು, ಕಬ್ಬಿಣ ಬೆಳೆ ಪ್ರತಿ ಟನ್'ಗೆ 3500 ರೂಪಾಯಿ ಬೆಲೆ ನಿಗದಿ ಮಾಡಬೇಕು, ಹೊಲಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಮಾಡಬೇಕು, ರೈತರ ರಾಷ್ಟ್ರೀಕೃತ ಬ್ಯಾಂಕ್ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.