ಮೊಳಕಾಲ್ಮೂರು:- ವಿದ್ಯಾರ್ಥಿ ದಿಸೆಯಲ್ಲಿ ಮೊಬೈಲ್ ಗೆ ದಾಸರಾಗದೆ ಪುಸ್ತಕ ಓದುವ ಹವ್ಯಾಸ ರೂಢಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಸಿವಿಲ್ ನ್ಯಾಯಾಧೀಶರಾದ ಕೆ.ಟಿ.ಪ್ರಿಯಾಂಕ ಹೇಳಿದರು. ತಾಲೂಕಿನ ಬಿಜಿಕೆರೆ ಗ್ರಾಮದ ಶ್ರೀ ಬಸವೇಶ್ವರ ಗ್ರಾಮಾಂತರ ಪ್ರೌಢ ಶಾಲಾ ಆವರಣದಲ್ಲಿ ಗುರುವಾರ ತಾಲೂಕು ಕಾನೂನು ಸೇವಾ ಸಮಿತಿ,ಅಭಿಯೋಜನೆ ಇಲಾಖೆ,ವಕೀಲರ ಸಂಘ,ಸಾರ್ವಜನಿಕ ಶಿಕ್ಷಣ ಇಲಾಖೆ,ತಾಲೂಕು ಆಡಳಿತದ ಸಹಯೋಗದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾನೂನು ಅರಿವು,ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು.