ಶಿವಮೊಗ್ಗ: ರಿಪ್ಪನ್ ಪೇಟೆ ಸಮೀಪದ ಸೂಡೂರು ಗೇಟ್ ಬಳಿ ಕಾರು ಅಪಘಾತ
ಚಾಲಕನ ನಿಯಂತ್ರಣ ತಪ್ಪಿದ ಕಾರು ಅಪಘಾತವಾಗಿರುವ ಘಟನೆಯ ಹೊತ್ನಾಗರ ತಾಲೂಕಿನ ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸುಡೂರು ಗೇಟ್ ಬಳಿಯ ತಿರುವಿನಲ್ಲಿ ಶುಕ್ರವಾರ ನಡೆದಿದೆ. ಮಾರುತಿ ಸ್ವಿಫ್ಟ್ ಕಾರಿನಲ್ಲಿ ಮಂಡಗದ್ದೆ ಸಮೀಪದ ಮಚವಳಿ ಗ್ರಾಮದ ಮಂಜಪ್ಪ ಎಂಬುವರು ರಿಪ್ಪನ್ ಪೇಟೆ ಕಡೆ ಬರುತ್ತಿದ್ದಾಗ, ಕಾರು ಚಾಲಕನ ನಿಯಂತ್ರಣ ತಪ್ಪಿದೆ.ಇದರಿಂದಾಗಿ ರಸ್ತೆ ಪಕ್ಕದಲ್ಲಿದ್ದಂತ ಹೊಂಡಕ್ಕೆ ಕಾರು ಬಿದ್ದಿದೆ. ಅಪಘಾತದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.