2018ರಿಂದ 2023ರವರೆಗೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರವು ನೀಡಿದ್ದ 600 ಭರವಸೆಗಳಲ್ಲಿ 10 ಶೇಕಡಾವನ್ನೂ ಈಡೇರಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ರಾಜ್ಯದಲ್ಲಿ ಘೋಷಿಸಲಾದ 63 ಹೊಸ ತಾಲ್ಲೂಕುಗಳಲ್ಲಿ ಬಿಜೆಪಿ ಆಡಳಿತ ಅವಧಿಯಲ್ಲಿ ಕೇವಲ 14 ಕಡೆ ಮಾತ್ರ ತಾಲ್ಲೂಕು ಆಡಳಿತ ಕಚೇರಿಗಳನ್ನು ನಿರ್ಮಿಸಲಾಗಿದೆ ಎಂದು ಅವರು ಹೇಳಿದರು.2023ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಉಳಿದ 49 ತಾಲ್ಲೂಕುಗಳಲ್ಲಿ ಪ್ರಜಾಸೌಧಗಳ ನಿರ್ಮಾಣಕ್ಕೆ ಮಂಜೂರಿ ನೀಡಿ ಕಾಮಗಾರಿ ಪ್ರಗತಿಯಲ್ಲಿ ಇದೆ ಎಂದು ಯಡ್ರಾಮಿಯಲ್ಲಿ ಮಾತನಾಡಿದ ಸಿಎಂ ತಿಳಿಸಿದರು.