ಅಂಕೋಲ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ದೂರು ದಾಖಲು
ಅಂಕೋಲ ತಾಲೂಕಿನ ಪೂಜಗೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಹಿನ್ನಲೆ ಯಲ್ಲಿ ಕಾಲೇಜಿನ ಬಳಿ ಪೋಷಕರು ಹಾಗೂ ವಿದ್ಯಾರ್ಥಿ ಗಳು ಪ್ರತಿಭಟನೆ ನಡೆಸಿದರು. ಆರೋಪದ ಪ್ರಕಾರ, ಕಾಲೇಜಿನ ಉಪನ್ಯಾಸಕ ರಾಮಚಂದ್ರ ಅಂಕೋಲೆಕರ್ ವಿದ್ಯಾರ್ಥಿನಿಯೋರ್ವಳಿಗೆ ಪಾಠದ ವೇಳೆ ಹಾಗೂ ಮೊಬೈಲ್ ಮೂಲಕ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದಾನೆ ಎಂದು ತಿಳಿದು ಬಂದಿದೆ. ಈ ಕುರಿತು ಪೀಡಿತ ವಿದ್ಯಾರ್ಥಿನಿ ಅಂಕೋಲ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಿದ್ದಾಳೆ