ದೊಡ್ಡಬಳ್ಳಾಪುರ, ಮಾನಸಿಕ ಅಸ್ವಸ್ಥತೆಯಿಂದ ಚೇತರಿಕೆಗೊಂಡ ರೋಗಿಗಳ ಪುನರ್ವಸತಿಗೆ ಮಾನಸಧಾರ ಯೋಜನೆ ಉಪಯುಕ್ತವಾಗಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಅಧ್ಯಕ್ಷರಾದ ಡಾ. ಹುಲಿಕಲ್ ನಟರಾಜ್ ತಿಳಿಸಿದರು. ನಗರದ ಲಯನ್ಸ್ ಚಾರಿಟೀಸ್ ಟ್ರಸ್ಟ್ ಭವನದಲ್ಲಿ ಮಂಗಳವಾರ ನಡೆದ ಎಸ್ಕಾನ್ ಜೆನ್ಸೆಟ್ಸ್ ಕಂಪನಿಯ ಸಿಎಸ್ಆರ್ ನಿಧಿಯಡಿ ‘ನೂತನ ವಾಹನ ಹಸ್ತಾಂತರ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರದ ಈ ಕಾರ್ಯಕ್ರಮದಿಂದಾಗಿ ಗ್ರಾಮೀಣ ಭ