ಚನ್ನಪಟ್ಟಣ: ಚನ್ನಪಟ್ಟಣದಲ್ಲಿ ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಮಾರುಕಟ್ಟೆಯಲ್ಲಿ ಜನದಟ್ಟಣೆ
ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಚನ್ನಪಟ್ಟಣದ ಮಾರುಕಟ್ಟೆಗಳಲ್ಲಿ ಹೂವು, ಹಣ್ಣು ಮತ್ತು ಪೂಜಾ ಸಾಮಗ್ರಿಗಳ ಖರೀದಿ ಜೋರಾಗಿದೆ. ಮಲ್ಲಿಗೆ, ಸೇವಂತಿಗೆ ಸೇರಿದಂತೆ ವಿವಿಧ ಹೂವುಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ವ್ಯಾಪಾರಸ್ಥರು ಮತ್ತು ಗ್ರಾಹಕರಿಂದ ಮಾರುಕಟ್ಟೆ ತುಂಬಿ ತುಳುಕುತ್ತಿದೆ.