ಹೆಗ್ಗಡದೇವನಕೋಟೆ: ಉತ್ತಮ ಆಡಳಿತ ವ್ಯವಸ್ಥೆಗಾಗಿ ಕಾಂಗ್ರೆಸ್ ಬಲಪಡಿಸಿ : ಚಿಕ್ಕೆರೆಯೂರಿನಲ್ಲಿ ಶಾಸಕ ಅನಿಲ್ ಚಿಕ್ಕಮಾದು
ಚಾಮರಾಜನಗರ ಲೋಕಸಭಾ ಚುನಾವಣೆ ಅಂಗವಾಗಿ ಭಾನುವಾರ ಸಂಜೆ ಐದರ ವೇಳೆಯಲ್ಲಿ ಎಚ್.ಡಿ. ಕೋಟೆ ತಾಲ್ಲೂಕಿನ ಹಂಪಾಪುರ ಹೋಬಳಿಯ ಚಿಕ್ಕೆರೆಯೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಅವರ ಪರ ಶಾಸಕ ಅನಿಲ್ ಚಿಕ್ಕಮಾದು ಮತಯಾಚನೆ ಮಾಡಿದರು. ನಂತರ ಮಾತನಾಡಿದ ಅವರು ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಒಂಬತ್ತು ದಿನಗಳಲ್ಲಿ ನುಡಿದಂತೆ ಗ್ಯಾರಂಟಿಗಳನ್ನು ಜಾರಿಗೆ ತರಲಾಯಿತು. ಅದೇ ರೀತಿ ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಅನೇಕ ಜನಪರ ಗ್ಯಾರಂಟಿ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ತಿಳಿಸಿದ್ದು, ಈ ಗ್ಯಾರಂಟಿಗಳು ಸಕಾರಗೊಳ್ಳಬೇಕಾದರೆ ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಭೋಸ್ ರವರನ್ನು ಗೆಲ್ಲಿಸಿ ಎಂದರು