ಕಟೀಲು ದೇವಳಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪತ್ನಿ ಸಮೇತ ಭೇಟಿ ನೀಡಿದರು, ದೇವಳದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಆಸ್ರಣ್ಣ ದೇವರ ಶೇಷ ವಸ್ತ್ರ, ಪ್ರಸಾದ ನೀಡಿದರು. ಈ ಸಂದರ್ಭ ಮುಕ್ತೇಸರ ವಾಸುದೇವ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಹರಿನಾರಾಯಣ ದಾಸ ಆಸ್ರಣ್ಣ ಮತ್ತಿತರರು ಉಪಸ್ಥಿತರಿದ್ದರು.