ಚಾಮರಾಜನಗರ: ಮಹದೇಶ್ವರ ಬೆಟ್ಟ ಪಾದಯಾತ್ರೆ ವೇಳೆ ಅಪಘಾತ – ಪಾದಾಚಾರಿ ಹಾಗೂ ಬೈಕ್ ಸವಾರನಿಗೆ ತೀವ್ರ ಪೆಟ್ಟು
ಚಾಮರಾಜನಗರ ಜಿಲ್ಲೆಯ ಮಂಗಲ ಸಮೀಪದ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಗೆ ತೆರಳುತ್ತಿದ್ದ ವೇಳೆ ಬೈಕ್ ಅಪಘಾತ ಸಂಭವಿಸಿ, ಪಾದಚಾರಿ ಹಾಗೂ ಬೈಕ್ ಸವಾರ ತೀವ್ರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ. ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದ ಶ್ರವಣ್ ಎಂಬವರು ಮಹದೇಶ್ವರ ಬೆಟ್ಟದ ದರ್ಶನಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಬೈಕ್ ಬಿದ್ದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಶ್ರವಣ್ ತೀವ್ರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಿದ್ದಾರೆ. ಬೈಕ್ ಸವಾರ ಸಿಂಗನಪುರ ಗ್ರಾಮದವರೆಂದು ಗುರುತಿಸಲಾಗಿದೆ. ಅವರು ಓಡಿಸುತ್ತಿದ್ದ ಬ್ಯೆಕ್ ಹೀರೋ ಹೋಂಡಾ ಆಗಿದೆ. ಈ ಅಪಘಾತದಲ್ಲಿ ಬೈಕ್ ಸವಾರನೂ ಕೂಡ ಗಾಯಗೊಂಡಿದ್ದಾರೆ