ಬೆಳ್ತಂಗಡಿ: ಮಾದಕ ವಸ್ತು ಮಾರಾಟ ಯತ್ನ, ಇಬ್ಬರ ಬಂಧನ
ಬೆಳ್ತಂಗಡಿಯ ಗುರುವಾಯನಕೆರೆ ಸರ್ಕಾರಿ ಪ್ರೌಢಶಾಲಾ ಮೈದಾನದ ಬಳಿ ಎಂಡಿಎಂಎ ಹಾಗೂ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳದಲ್ಲಿದ್ದ ನಾಲ್ವರ ಪೈಕಿ ಇಬ್ಬರು ಪೊಲೀಸರಿಗೆ ಸಿಕ್ಕಿಬಿದ್ದಿದ್ದು, ಉಳಿದವರಿಗಾಗಿ ಹುಡುಕಾಟ ನಡೆದಿದೆ.