ಕಲಬುರಗಿ: ತಳವಾರ ಸಮಾಜವನ್ನು ತುಳಿಯಲು ಕಾಂಗ್ರೆಸ್ ಪ್ರಯತ್ನ: ನಗರದಲ್ಲಿ ಶಾಸಕ ಬಸವರಾಜ ಮತ್ತಿಮಡು
ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರ ಮನೆಮುಂದೆ ತಳವಾರ ಸಮಾಜದ ಹಕ್ಕುಗಳಿಗಾಗಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಧರಣಿಯಲ್ಲಿ ಪಾಲ್ಗೊಂಡ ಶಾಸಕ ಬಸವರಾಜ ಮತ್ತಿಮಡು ಭಾರೀ ಆಕ್ರೋಶ ವ್ಯಕ್ತಪಡಿಸಿದರು. ಕಲಬುರಗಿ-ಯಾದಗಿರಿ ಜಿಲ್ಲೆಗಳಲ್ಲಿ ತಳವಾರ ಸಮಾಜದ ಸಮಸ್ಯೆ ಗಂಭೀರವಾಗಿದ್ದರೂ, ಕಾಂಗ್ರೆಸ್ ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿದರು. ಇಲ್ಲಿನ ಕಾಂಗ್ರೆಸ್ ನಾಯಕರು ಉದ್ದೇಶಪೂರ್ವಕವಾಗಿ ತಳವಾರ ಸಮಾಜವನ್ನು ತುಳಿಯಲು ಯತ್ನಿಸುತ್ತಿದ್ದಾರೆ. ಇದು ಅವರ ಸಣ್ಣತನದ ಸಂಕೇತ ಎಂದು ಶಾಸಕ ಮತ್ತಿಮಡು ಖಂಡಿಸಿದರು. ತಳವಾರ ಸಮಾಜದ ಜನರಿಗೆ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ, ಸಿಂಧುತ್ವ ಪ್ರಮಾಣ ಪತ್ರ ಹಾಗೂ ಸರ್ಕ