ಯಲ್ಲಾಪುರ: ಗೋವಾದ ಪರ್ತಗಾಳಿಯ ಜೀವೋತ್ತಮ ಮಠದಲ್ಲಿ ನಡೆಯುತ್ತಿರುವ ಸಾರ್ಧ ಪಂಚ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಅವರು ಮಠಕ್ಕೆ ಭೇಟಿ ನೀಡಿದರು. ಭೇಟಿ ಸಂದರ್ಭದಲ್ಲಿ ಮಠಾಧೀಶರಾದ ಪರಮಪೂಜ್ಯ ಶ್ರೀಮದ್ ವಿಧ್ಯಾದೀಶತೀರ್ಥ ಶ್ರೀಪಾದ ವಡೆಯರ್ ಸ್ವಾಮಿಜಿಗಳ ಆಶೀರ್ವಾದವನ್ನು ಶಾಸಕರು ಪಡೆದರು.