ಹರಪನಹಳ್ಳಿ: ಇಂದಿನ ರಾಜಕಾರಣಿಗಳಲ್ಲಿ ಒಬ್ಬರನ್ನೊಬ್ಬರು ಕಂಡೆ ದ್ವೇಷ: ಹರಪನಹಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬೇಸರ
ಅಂದಿನ ರಾಜಕಾರಣಿಗಳಲ್ಲಿ ಪರಸ್ಪರ ಸೌಹಾರ್ದತೆಯ ಭಾವನೆ ಕಾಣುತ್ತಿದ್ದೆವು, ಆದರೆ ಇಂದಿನ ರಾಜಕಾರಣಿಗಳಲ್ಲಿ ಒಬ್ಬರನ್ನೊಬ್ಬರು ಕಂಡರೆ ದ್ವೇಷದ ಭಾವನೆ ಎದ್ದು ಕಾಣುತ್ತಿದೆ ಈ ಬೆಳವಣಿಗೆ ನಿಜಕ್ಕೂ ಬೇಸರದ ಸಣಗತಿ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು. ವಿಜಯನಗರ ಹರಪನಹಳ್ಳಿ ನಗರದ ಟಿಎಂಎಇ ಸಂಸ್ಥೆಯ ಜ್ಞಾನ ಗಂಗೋತ್ರಿ ಆವರಣದಲ್ಲಿ ಭಾನುವಾರ ಕರ್ನಾಟಕ ರಾಜಕೀಯ ಅಕಾಡೆಮಿ ವತಿಯಿಂದ ಎಂ ಪಿ ಪ್ರಕಾಶ್ ಸಂಸದೀಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.