ಹಳಿಯಾಳ: ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಕಂಚಿನ ಪದಕ ಗಿಟ್ಟಿಸಿದ ಹಳಿಯಾಳ ಕ್ರೀಡಾ ವಸತಿ ನಿಲಯದ ಪ್ರತಿಭಾವಂತ ವಿದ್ಯಾರ್ಥಿನಿ ಮನಿಶಾ ಸಿದ್ದಿ
ಹಳಿಯಾಳ : ಹರಿಯಾಣದ ಪಾಣಿಪತ್ ನಲ್ಲಿ ನಡೆದ ಎಸ್.ಜಿ.ಎಫ್.ಐ ಪದವಿಪೂರ್ವ ಕಾಲೇಜುಗಳ ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆಯ 72 ಕೆಜಿ ವಿಭಾಗದಲ್ಲಿ ಹಳಿಯಾಳ ಕ್ರೀಡಾ ವಸತಿ ನಿಲಯದ ಪ್ರತಿಭಾವಂತ ವಿದ್ಯಾರ್ಥಿನಿ ಮನಿಶಾ ಸಿದ್ದಿ ಅವರು ಉತ್ತಮ ಪ್ರದರ್ಶನ ತೋರಿ ತೃತೀಯ ಸ್ಥಾನಗಳಿಸಿ ಕಂಚಿನ ಪದಕವನ್ನು ತಮ್ಮದಾಗಿಸಿಕೊಳ್ಳುವ ಮೂಲಕ ತಾಲೂಕಿಗೆ ಜಿಲ್ಲೆಗೆ ಮತ್ತು ರಾಜ್ಯಕ್ಕೆ ಕೀರ್ತಿಯನ್ನು ತಂದಿದ್ದಾರೆ ಈ ಬಗ್ಗೆ ಭಾನುವಾರ ಸಂಜೆ ಆರು ಗಂಟೆ ಸುಮಾರಿಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ. ಇವರ ಸಾಧನೆಗೆ ಮತ್ತು ಸಾಧನೆಗೆ ಕಾರಣಿಕರ್ತರಾದ ಹಳಿಯಾಳದ ಕ್ರೀಡಾ ವಸತಿ ನಿಲಯದ ತರಬೇತುದಾರರಿಗೆ ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್ ವಿ ದೇಶಪಾಂಡೆ ಅವರು ಸೇರಿದಂತೆ ತಾಲೂಕಿನ ಗಣ್ಯರನೇಕರು ಅಭಿನಂದಿಸಿದ್ದಾರೆ.