ಖಾಲಿ ಹುದ್ದೆ ಭರ್ತಿ ಹಾಗೂ ವಯೋಮಿತಿ ಸಡಿಲಿಕೆಗೆ ಆಗ್ರಹಿಸಿ ಡಿಸೆಂಬರ್ 8 ರಂದು ಧಾರವಾಡದಲ್ಲಿ ಶಾಂತಿಯುತ ಪಾದಯಾತ್ರೆ ನಡೆಸಲಾಗುವುದು ಎಂದು ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ ಅಧ್ಯಕ್ಷ ಕಾಂತಕುಮಾರ ತಿಳಿಸಿದರು. ನಗರದಲ್ಲಿ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸೆಂಬರ್ 8 ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡ ಶ್ರೀನಗರ ವೃತ್ತದಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ವರೆಗೆ ಪಾದಯಾತ್ರೆ ನಡೆಯಲಿ