ಪಾಂಡವಪುರ: ಮೇಲುಕೋಟೆಗೆ ಭೇಟಿ ನೀಡಿ ಶ್ರೀ ಚಲುವನಾರಾಯಣ ಸ್ವಾಮಿ ದರ್ಶನ ಪಡೆದ ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್
ಪಾಂಡವಪುರ : ತಾಲೂಕಿನಲ್ಲಿರುವ ವಿಶ್ವವಿಖ್ಯಾತ ಪವಿತ್ರ ಪುಣ್ಯ ಕ್ಷೇತ್ರ ಮೇಲುಕೋಟೆಗೆ ಇಂದು ಭಾರತದ ಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರು ಭೇಟಿ ನೀಡಿದರು. ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಉಪರಾಷ್ಟ್ರಪತಿಗಳು ಮೇಲುಕೋಟೆಗೆ ಆಗಮಿಸಿ ದೇವಾಲಯಕ್ಕೆ ಭೇಟಿ ನೀಡಿ ಶ್ರೀ ಚೆಲುವ ನಾರಾಯಣಸ್ವಾಮಿ ದರ್ಶನ ಪಡೆದು, ವಿಶೇಷ ಪೂಜೆ ನೆರವೇರಿಸಿದರು. ಮೇಲುಕೋಟೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಆವರಣದಲ್ಲಿ ನಿರ್ಮಿಸಲಾಗಿದ್ದ ಹೆಲಿಪ್ಯಾಡ್ನಲ್ಲಿ ಉಪರಾಷ್ಟ್ರಪತಿಗಳು ಮತ್ತು ರಾಜ್ಯಪಾಲರು ಬಂದಿಳಿದ ವೇಳೆ, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರ ಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ, ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಆತ್ಮೀಯವಾಗಿ ಸ್ವಾಗತಿಸಿದರು.