ಕಲಘಟಗಿ ತಾಲ್ಲೂಕಿನ ಹಿರೇಹೊನ್ನಳ್ಳಿ ಗ್ರಾಮದಲ್ಲಿ ರಾಜ್ಯ ಹೆದ್ದಾರಿಯಲ್ಲಿ ಬೈಕ್ ಹಾಗೂ ಲಾರಿ ಮದ್ಯ ಭೀಕರ ಅಪಘಾತ ಸಂಭವಿಸಿದೆ. ಗುರುವಾರ ಸಂಜೆ 5 ಗಂಟೆಗೆ ದೂಳಿಕೊಪ್ಪ ಗ್ರಾಮದಿಂದ ಶಾಲೆ ಮೂಗಿಸಿಕೊಂಡು ಬೈಕ್ ನಲ್ಲಿ ತೆರಳುತ್ತಿದ್ದ ಶಿಕ್ಷಕಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕಿ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಅಪಘಾತ ಸಂಭವಿಸಿದ ಸ್ಥಳಕ್ಕೆ ತಕ್ಷಣ ಧಾವಿಸಿದ ಹಿರೇಹೊನ್ನಳ್ಳಿ ಗ್ರಾಮಸ್ಥರು ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡಿದ್ದಾರೆ.