ದೇವನಹಳ್ಳಿ: ತಿಂಡ್ಲು ಗ್ರಾಮದಲ್ಲಿ ನೂತನ ಸರ್ಕಾರಿ ಶಾಲೆ ಉದ್ಘಾಟಿಸಿದ ಸಚಿವ ಕೆ.ಹೆಚ್ ಮುನಿಯಪ್ಪ
*ತಿಂಡ್ಲು ಗ್ರಾಮದಲ್ಲಿ ನೂತನ ಸರ್ಕಾರಿ ಶಾಲೆ ಉದ್ಘಾಟಿಸಿದ ಸಚಿವರು ದೇವನಹಳ್ಳಿ ತಾಲ್ಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಂಡ್ಲು ಗ್ರಾಮದಲ್ಲಿ ಮೂರ್ತಿ ಟ್ರಸ್ಟ್ ವತಿಯಿಂದ ನಿರ್ಮಿಸಿರುವ ನಮ್ಮೂರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ನೂತನ ಕಟ್ಟಡವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಮೂರ್ತಿ ಟ್ರಸ್ಟ್ ನ ಅಧ್ಯಕ್ಷರಾದ ಸುಧಾಮೂರ್ತಿ ಅವರೊಂದಿಗೆ ಉದ್ಘಾಟಿಸಿದರು.