ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ಶಾಸಕರು ಹಾಗೂ ಮಾಜಿ ಸಚಿವರಾದಂತಹ ಶ್ರೀ ಶಾಮನೂರು ಶಿವಶಂಕರಪ್ಪನವರು ಬೆಂಗಳೂರಿನಲ್ಲಿ ಭಾನುವಾರ ಸಂಜೆ ವಿಧಿವಶರಾಗಿದ್ದು, ಹಿರಿಯ ರಾಜಕಾರಣಿಯ ನಿಧನಕ್ಕೆ ಶಿಕಾರಿಪುರದ ಶಾಸಕರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಸಂತಾಪವನ್ನು ಸೂಚಿಸಿದ್ದಾರೆ.